Sunday, 15 August 2021

ಮಹಾರಾಷ್ಟ್ರದಲ್ಲಿ ಒಂದೇ ದಿನ 4,797 ಕೊರೋನಾ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ ಒಂದೇ ದಿನ 4,797 ಕೊರೋನಾ ಪ್ರಕರಣ ದಾಖಲು

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆ -ಇಳಿಕೆಯಾಗುತ್ತಿದ್ದು, ಇದೀಗ ನಿನ್ನೆ ಒಂದೇ ದಿನ 4,797 ಪ್ರಕರಣಗಳು ಮತ್ತು130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 4,797 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 63,92,660ಕ್ಕೆ ಏರಿಕೆಯಾಗಿದೆ. 130 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,35,039ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 3,710 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 61,89,933ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ 64,219 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.


SHARE THIS

Author:

0 التعليقات: