Friday, 6 August 2021

ಭಾರತದಲ್ಲಿ 49.53 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆ


ಭಾರತದಲ್ಲಿ 49.53 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ನವದೆಹಲಿ, ಆಗಸ್ಟ್ 6: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕಾಗಿ ಲಸಿಕೆ ವಿತರಣೆಯನ್ನು ಹೆಚ್ಚಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 202 ದಿನಗಳಲ್ಲಿ 49 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ 50,29,573 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 49,53,27,595 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶುಕ್ರವಾರ ಒಂದೇ ದಿನ 18 ರಿಂದ 44 ವಯೋಮಾನದ 27,26,494 ಜನರಿಗೆ ಮೊದಲ ಡೋಸ್ ಹಾಗೂ 4,81,823 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 16,92,68,754 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,07,72,537 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.SHARE THIS

Author:

0 التعليقات: