Tuesday, 10 August 2021

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಬೊಮ್ಮಾಯಿ ಆದೇಶ


 ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಬೊಮ್ಮಾಯಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿ, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು.  ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ  ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.

ಆದೇಶ ಪ್ರಕಟ: ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು.

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು. ಜೊತೆಗೆ ಇಂತಹ ಕಾಣಿಕೆಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದವರು ಆದೇಶ ಹೊರಡಿಸಿದ್ದಾರೆ.


SHARE THIS

Author:

0 التعليقات: