Sunday, 1 August 2021

ಶಿರಾಡಿ ಘಾಟಿ ಸುರಂಗ ಮಾರ್ಗ ಅನಿವಾರ್ಯ

ಶಿರಾಡಿ ಘಾಟಿ ಸುರಂಗ ಮಾರ್ಗ ಅನಿವಾರ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ರಾಜ್ಯ ರಾಜಧಾನಿಯೊಂದಿಗೆ ಸಂಪರ್ಕಿ ಸುವ ಪ್ರಮುಖ ಹೆದ್ದಾರಿಗಳು ಪ್ರತೀ ವರ್ಷ ಭಾರೀ ಮಳೆಯ ಸಂದರ್ಭ ಕುಸಿದು ಸಂಪರ್ಕ ಕಡಿತ ಸಾಮಾನ್ಯ ಎಂಬಂತಾಗಿದ್ದು, ಪರ್ಯಾಯ ವ್ಯವಸ್ಥೆ ಯಾದ ಶಿರಾಡಿ ಘಾಟಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ ಬಂದಿದೆ.

ಈ ವರ್ಷದ ಮಳೆಗಾಲ ದಲ್ಲಿ ಬೆಂಗಳೂರು ಹಾಗೂ ಇತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ದೋಣಿಗಲ್‌ ಬಳಿ ಕುಸಿತ, ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿಯ 6ನೇ ತಿರುವಿನಲ್ಲಿ ಕುಸಿತ ಕಾಣಿಸಿಕೊಂಡಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಇದೀಗ ಘನ ವಾಹನಗಳಿಗೆ ಬೆಂಗಳೂರು ಕಡೆಗೆ ಸಂಚರಿಸಲು ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾತ್ರ ಸಂಚಾರಕ್ಕೆ ಮುಕ್ತವಾಗಿದ್ದರೂ ಈ ಮಾರ್ಗದಲ್ಲಿಯೂ ಮಡಿಕೇರಿ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಅಲ್ಲಿಯೂ ಸಂಚಾರ ಕಷ್ಟಕರವಾಗಿದೆ.

ಈ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಅಗತ್ಯವಾಗಿದ್ದು, ಶಿರಾಡಿ ಘಾಟಿ ಸುರಂಗ ಮಾರ್ಗ ನಿರ್ಮಾಣ ಯೋಜನೆ ಸೂಕ್ತ ಪರ್ಯಾಯವಾಗಿದೆ. ಬಹು ನಿರೀಕ್ಷಿತ ಈ ಯೋಜನೆ ಕಾರ್ಯಗತ ಮಾಡುವುದು ಅತಿ ಅಗತ್ಯವಾಗಿದೆ. ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಕೆನರಾ ಇಂಡಸ್ಟ್ರೀಸ್‌ ಅಸೋಸಿಯೇಶನ್‌, ಕಾನ್‌ಫೆಡರೇಶನ್‌ ಆಫ್‌ ಇಂಡಿಯನ್‌ ಇಂಡಸ್ಟ್ರೀಸ್‌ ಮತ್ತಿತರ ಸಂಘಟನೆಗಳು ಈಗಾಗಲೇ ಶಿರಾಡಿ ಘಾಟಿ ಸುರಂಗ ಮಾರ್ಗ ಯೋಜನೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳ ಬೇಕೆಂದು ಕೇಂದ್ರ ಸರಕಾರದ ಮೇಲೆ ಒತ್ತಡ ತಂದಿವೆ.

ಪ್ರಸ್ತುತ ಅಡ್ಡಹೊಳೆಯಿಂದ ಮಾರನಹಳ್ಳಿ ವರೆಗೆ 27 ಕಿ.ಮೀ. ಕಾಂಕ್ರೀಟ್‌ ರಸ್ತೆ ಇದೆ. ಇದರ ಜತೆಗೆ ಸುರಂಗಮಾರ್ಗ ನಿರ್ಮಾಣ ಆಗಲಿದೆ.SHARE THIS

Author:

0 التعليقات: