Saturday, 7 August 2021

ನಾಳೆ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆ


ನಾಳೆ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆ

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಹೊಸದಾಗಿ ನೇಮಕಗೊಂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ನಾಳೆ ಅಂದರೆ ಸೋಮವಾರ ಮಧ್ಯಾಹ್ನ 3: 30 ಕ್ಕೆ SSLC ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದ್ದಾರೆ ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ಪರೀಕ್ಷಾ ಮಂಡಳಿಯ (KSEEB) ನಿರ್ದೇಶಕಿ ಸುಮಂಗಲಾ ವಿ ಅವರು ಹೇಳಿದ್ದಾರೆ.

ಫಲಿತಾಂಶವನ್ನು ಅಧಿಕೃತ KSEEB ವೆಬ್‌ಸೈಟ್ sslc.karnataka.gov.in ನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು ಒಟ್ಟು ಶೇ. 35 ಅಥವಾ 600 ರಲ್ಲಿ 210 ಅಂಕಗಳನ್ನು ಪಡೆಯಬೇಕು. ಪಾಸ್ ಸರ್ಟಿಫಿಕೇಟ್ ಪಡೆಯಲು, ಅವರು ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 70 ಅಂಕಗಳನ್ನು ಪಡೆಯಬೇಕು ಎಂದು ತಿಳಿದುಬಂದಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ಇತರೆ ರಾಜ್ಯಗಳಂತೆ, ಕರ್ನಾಟಕವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಲಿಲ್ಲ. ಬದಲಿಗೆ ಆಫ್‌ಲೈನ್ ಮೋಡ್‌ನಲ್ಲಿ ನಡೆಸಿತು. ಹೊಸ ರೂಪದಲ್ಲಿ ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಪರೀಕ್ಷೆ ನಡೆಯಿತು. ಗಣಿತ, ವಿಜ್ಞಾನ, ಮತ್ತು ಸಮಾಜ ವಿಜ್ಞಾನ ಮತ್ತು ಭಾಷಾ ಪತ್ರಿಕೆಗಳು ಸೇರಿದಂತೆ ಪ್ರಮುಖ ವಿಷಯಗಳಿಗೆ ಎರಡು ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಯಿತು.

ಇದೀಗ ಈ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.



SHARE THIS

Author:

0 التعليقات: