ಮಹಿಳೆಯರು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು: ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಭಾರತದ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆಗೊಳಿಸಲು ಅನುವು ಮಾಡಿಕೊಡುವ ಮಹತ್ವದ ಮಧ್ಯಂತರ ಆದೇಶದಲ್ಲಿ ಸುಪ್ರೀಂ ಕೋರ್ಟ್ ಮುಂದಿನ ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಎನ್ ಡಿ ಎ (ರಾಷ್ಟ್ರೀಯ ರಕ್ಷಣಾ ಅಕಾಡೆಮಿ) ಪರೀಕ್ಷೆಗೆ ಮಹಿಳೆಯರು ಕುಳಿತುಕೊಳ್ಳಬಹುದು ಎಂದು ಹೇಳಿದೆ.
ದೇಶದ ಮಿಲಿಟರಿಯಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನ ಸೇವಾ ಅವಕಾಶಗಳು ಬಂದಾಗ ಸರಕಾರದ 'ಮನಸ್ಥಿತಿ ಸಮಸ್ಯೆ' ಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು 'ನೀವು ಬದಲಾವಣೆ ಮಾಡಿಕೊಳ್ಳುವುದು ಉತ್ತಮ' ಎಂದು ಎಚ್ಚರಿಸಿದೆ.
0 التعليقات: