Saturday, 14 August 2021

ಕೆಂಪುಕೋಟೆಗೆ ಸರ್ಪಗಾವಲು: ಪ್ರಧಾನಿ ಮೋದಿ ಧ್ವಜಾರೋಹಣ, ವಾಯುಸೇನೆಯಿಂದ ಹೂಮಳೆ


 ಕೆಂಪುಕೋಟೆಗೆ ಸರ್ಪಗಾವಲು: ಪ್ರಧಾನಿ ಮೋದಿ ಧ್ವಜಾರೋಹಣ, ವಾಯುಸೇನೆಯಿಂದ ಹೂಮಳೆ

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಎಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಕೆಂಪು ಕೋಟೆಯ ಸುತ್ತಮುತ್ತ ಅಪಾರ ಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆಗೆ 5000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. NSG ಸ್ನೈಪರ್ ಗಳು, ಕಮಾಂಡೋಗಳು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಎತ್ತರದ ಕಟ್ಟಡಗಳ ಮೇಲೆ ಶಾರ್ಪ್ ಶೂಟರ್ ಗಳನ್ನು ನಿಯೋಜಿಸಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಭದ್ರತಾ ತುಕಡಿ ನಿಯೋಜನೆ ಮಾಡಲಾಗಿದೆ. ದೆಹಲಿ ಕೆಂಪು ಕೋಟೆಯ ಸುತ್ತ ಕಾಕಿ ಸರ್ಪಗಾವಲು ಹಾಕಲಾಗಿದೆ. 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಡಿಟೆಕ್ಟರ್ ರಾಡಾರ್ ಕಾರ್ಯಾಚರಣೆಯಲ್ಲಿವೆ. ಕೆಂಪು ಕೋಟೆಯ ಸುತ್ತ 350ಕ್ಕೂ ಅಧಿಕ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಎರಡು ಪೊಲೀಸ್ ಕಂಟ್ರೋಲ್ ರೂಂ ಗಳಲ್ಲಿ ನಿಗಾ ವಹಿಸಲಾಗಿದೆ.

ದೇಶಾದ್ಯಂತ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಮನೆಮಾಡಿದೆ. ಕೆಂಪುಕೋಟೆಯ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 7.30 ಕ್ಕೆ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಸೇನಾ ವಿಮಾನಗಳಿಂದ ಹೂಮಳೆ ಸುರಿಸಲಾಗುವುದು. ಈ ಮೂಲಕ ವಾಯುಸೇನೆ ಗೌರವ ಸಲ್ಲಿಸಲಿದ್ದು, ಧ್ವಜಾರೋಹಣ ಬಳಿಕ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಾರಿ ಮುಖ್ಯ ಅತಿಥಿಯಾಗಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಒಲಿಂಪಿಕ್ಸ್ ನಲ್ಲಿ ಭಾಗಿಯಾಗಿದ್ದ ಎಲ್ಲ ಕ್ರೀಡಾಪಟುಗಳು, ತರಬೇತಿದಾರರು ಮತ್ತು ಸಿಬ್ಬಂದಿಯನ್ನು ಆಹ್ವಾನಿಸಲಾಗಿದೆ. ಕೊರೋನಾ ವಾರಿಯರ್ಸ್ ಗಳಿಗೂ ಆಹ್ವಾನ ನೀಡಲಾಗಿದೆ.SHARE THIS

Author:

0 التعليقات: