Friday, 6 August 2021

ಇಂದಿರಾ ಕ್ಯಾಂಟೀನ್ ಗೆ ಮರುನಾಮಕರಣ ಮಾಡುವಂತೆ ಸಿಎಂಗೆ ಸಿಟಿ ರವಿ ಮನವಿ


 ಇಂದಿರಾ ಕ್ಯಾಂಟೀನ್ ಗೆ ಮರುನಾಮಕರಣ ಮಾಡುವಂತೆ ಸಿಎಂಗೆ ಸಿಟಿ ರವಿ ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹಾತ್ವಾಕಾಂಕ್ಷೆಯ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಕ್ಯಾಂಟೀನ್ ಗೆ ಮರುನಾಮಕರಣ ಮಾಡುವಂತೆ ಮಾಜಿ ಸಚಿವ ಸಿಟಿ ರವಿ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.

 ಈ ಕುರಿತು ಟ್ವೀಟ್ ಮಾಡಿರುವ ಸಿಟಿ ರವಿ, ‘ಕರ್ನಾಟಕದಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಿಗೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಸಾಧ್ಯವಾದಷ್ಟು ಶೀಘ್ರವೇ ಮರುನಾಮಕರಣ ಮಾಡಬೇಕೆಂದು ನಾನು ಮನವಿ ಮಾಡುತ್ತಿದ್ದೇನೆ’ ಎಂದು ಕೇಳಿಕೊಂಡಿದ್ದಾರೆ.

‘ಕನ್ನಡಿಗರು ತಾವು ಆಹಾರ ಸೇವಿಸುತ್ತಿರುವಾಗ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ಏಕೆ ನೆನಪಿಸಿಕೊಳ್ಳಬೇಕು?’ ಎಂದು ಟ್ವೀಟ್ ಮಾಡಿದ್ದಾರೆ.


SHARE THIS

Author:

0 التعليقات: