Saturday, 14 August 2021

ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯಲು ಚಿಂತನೆ: ಸಿಎಂ ಬಸವರಾಜ್ ಬೊಮ್ಮಾಯಿ


ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯಲು ಚಿಂತನೆ: ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಕೋವಿಡ್ ನಿರ್ವಹಣೆ ಸಭೆಯಲ್ಲಿ ಅಧಿಕಾರಿಗಳು ವಿವರವಾದ ಮಾಹಿತಿ ನೀಡಿದ್ದಾರೆ. ಕೋವಿಡ್ 2ನೇ ಅಲೆ  ಇನ್ನೂ ಪೂರ್ತಿ ಹೋಗಿಲ್ಲ. ಬಹಳ ಎಚ್ಚರಿಕೆಯಿಂದ ಕೊರೋನ ನಿಯಂತ್ರಿಸಬೇಕಾಗಿದೆ. ಸಭೆಯಲ್ಲಿ ಶಾಲೆಗಳ ಆರಂಭದ ಬಗ್ಗೆ ಚರ್ಚಿಸಲಾಗಿದೆ. ಕೊರೋನ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ತೆರೆಯುವುದಿಲ್ಲ. ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯಲು ಚಿಂತನೆ ನಡೆಸುತ್ತಿರುವುದಾಗಿ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

"ಕೋವಿಡ್ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭಿಸಲಾಗುವುದು, ಪಾಸಿಟಿವಿಟಿ ದರ ಶೇ. 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಸದ್ಯ ತರಗತಿಗಳನ್ನು ಆರಂಭಿಸುವುದಿಲ್ಲ. ಶಿಕ್ಷಕರು ಮತ್ತು ಪೋಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಮಕ್ಕಳಲ್ಲಿ ಸೋಂಕು ಪತ್ತೆಯಾದರೆ ಶಾಲೆಗಳನ್ನು ಒಂದು ವಾರ ಬಂದ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು" ಎಂದು ಸಿಎಂ ತಿಳಿಸಿದರು.

ಮುಂದಿನ 2 ವಾರ ಈಗ  ಜಾರಿಯಲ್ಲಿರುವ ಕೋವಿಡ್  ನಿಯಮಗಳನ್ನೇ ಮುಂದುವರಿಸಿ.   ಹೊಸದಾಗಿ ಯಾವುದೇ ನಿಯಮ ಬೇಡ . ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೈಟ್ ಕಫ್ಯೂ ಹಾಗೂ 8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ಯೂ ಜಾರಿಯಲ್ಲಿದ್ದು, ಇದನ್ನೇ ಮುಂದುವರಿಸಬೇಕು. ಈಗಿರುವ ನಿಯಮಗಳನ್ನೇ ಸರಿಯಾಗಿ ಪಾಲಿಸುವಂತೆ  ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಕೋವಿಡ್ ನಿರ್ವಹಣೆ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್ 3ನೇ ಅಲೆ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋವಿಡ್ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಇಂದು ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದರು.

ಮಕ್ಕಳ ಆಸ್ಪತ್ರೆಗೆ ಹೆಚ್ಚಿನ ಆದ್ಯತೆ ನೀಡುವಂತೆ, ಅನ್ಯ ರಾಜ್ಯಗಳ ಓಡಾಟದ ಮೇಲೆ ಹೆಚ್ಚಿನ ನಿಗಾ ಇಡುವಂತೆ ತಿಳಿಸಲಾಗಿದೆ. ಅನ್ಯ ರಾಜ್ಯಗಳಿಂದ ಬರುವವರಿಗೆ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಬೇಕು ಎಂದು ಸೂಚಿಸಿರುವ ಸಿಎಂ ಜಿಲ್ಲಾವಾರು ಕೋವಿಡ್ ಅಂಕಿ-ಅಂಶಗಳ ಮಾಹಿತಿ ಪಡೆದರು.


 



SHARE THIS

Author:

0 التعليقات: