Sunday, 8 August 2021

ಸಂಪುಟ ದರ್ಜೆಯ ಸ್ಥಾನಮಾನ ‌ಹಿಂಪಡೆಯಲು‌ ಯಡಿಯೂರಪ್ಪ ‌ಮನವಿ


 ಸಂಪುಟ ದರ್ಜೆಯ ಸ್ಥಾನಮಾನ ‌ಹಿಂಪಡೆಯಲು‌ ಯಡಿಯೂರಪ್ಪ ‌ಮನವಿ

ಬೆಂಗಳೂರು: ತನಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೋರಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗೆ ರವಿವಾರ ಯಡಿಯೂರಪ್ಪ ಪತ್ರ ಬರೆದಿದ್ದಾರೆ

 ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೆ ಯಡಿಯೂರಪ್ಪರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿತ್ತು. ಆದರೆ ‘ನಿಕಟಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ಸಾಕು. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು’ಎಂದು ಪತ್ರದಲ್ಲಿ ಯಡಿಯೂರಪ್ಪ ಕೋರಿದ್ದಾರೆ.


SHARE THIS

Author:

0 التعليقات: