Monday, 2 August 2021

ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಬಿಗ್ ಶಾಕ್


ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಬಿಗ್ ಶಾಕ್

ನವದೆಹಲಿ : ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದ್ದು, ದೇಶದ ರೈತರ ಸಾಲಮನ್ನಾ ಮಾಡುವ ಪ್ರಸ್ತಾವ ತನ್ನ ಪರಿಶೀಲನೆಯಲ್ಲಿ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

2008 ರಲ್ಲಿ ಕೇಂದ್ರ ಸರ್ಕಾರ ಸಾಲಮನ್ನಾ ಯೋಜನೆ ಜಾರಿಗೊಳಿಸಿತ್ತು. ಅದಾದ ನಂತರ ಅಂತಹ ಯೋಜನೆಯನ್ನು ಅನುಷ್ಠಾನಗೊಳಿಸಲ್ಲ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಗವಂತ ಕಾರಡ್ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

3 ಲಕ್ಷ ರೂ. ವರೆಗಿನ ಅಲ್ಪಾವಧಿ ಬೆಳೆ ಸಾಲಕ್ಕೆ ಬಡ್ಡಿ ರಿಯಾಯಿತಿ ನೀಡಡಲಾಗುತ್ತಿದೆ. ಖಾತ್ರಿ ರಹಿತ ಸಾಲಕ್ಕೆ ಬಡ್ಡಿ ರಿಯಾಯಿತಿ ನೀಡಲಾಗುತ್ತಿದೆ. ಖಾತ್ರಿ ರಹಿತ ಸಾಲದ ಮಿತಿಯನ್ನು 1 ರಿಂದ 1.6 ಲಕ್ಷ ರೂ.ಗೆ ರಿಸರ್ವ್ ಬ್ಯಾಂಕ್ ಹೆಚ್ಚಳ ಮಾಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ. ನಗದನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.SHARE THIS

Author:

0 التعليقات: