ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ : ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್ ಗರಂ
ತಿರುವನಂತಪುರ: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸುವವರಿಗೆ ಗಾಡಿಯಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನು ಹೇರಿರುವ ಕರ್ನಾಟಕ ಸರಕಾರದ ನಿರ್ಧಾರಕ್ಕೆ ಕೇರಳ ಕಿಡಿ ಕಾರಿದೆ. ಈ ರೀತಿ ನಿರ್ಬಂಧ ಹೇರುವುದು ಕೇಂದ್ರ ಸರಕಾರದ ಮಾರ್ಗಸೂಚಿಗೆ ವಿರುದ್ಧವಾದದ್ದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಆರ್ಟಿ ಪಿಸಿಆರ್ ನೆಗೆಟಿವ್ (72 ಗಂಟೆಗಳೊಳಗೆ ನಡೆಸಲಾದ ಪರೀಕ್ಷೆ) ವರದಿ ತರುವುದನ್ನು ಕಡ್ಡಾಯಗೊಳಿಸಿದೆ.ಈ ಕುರಿತು ಕೇರಳ ವಿಧಾನಸಭೆಯಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಪ್ರಶ್ನೆಗೆ ಉತ್ತರಿಸಿದ ಸಿಎಂ ಪಿಣರಾಯಿ, 'ಯಾವುದೇ ರಾಜ್ಯವೂ ತಮ್ಮ ಗಡಿಗಳನ್ನು ಬಂದ್ ಮಾಡಿ, ಪ್ರಯಾಣ ನಿರ್ಬಂಧ ಹೇರುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯವೇ ನಿರ್ದೇಶನ ನೀಡಿದೆ. ಆದರೆ, ಕರ್ನಾಟಕ ಸರಕಾರ ನಿರ್ಬಂಧದ ಮೂಲಕ ಈ ಮಾರ್ಗಸೂಚಿಯನ್ನು ಉಲ್ಲಂಘಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ರಾಜ್ಯ ಡಿಜಿಪಿ ಅನಿಲ್ ಕಾಂತ್ ಅವರು ಕರ್ನಾಟಕದ ಡಿಜಿಪಿ ಜತೆಗೆ ಮಾತುಕತೆ ನಡೆಸಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.
0 التعليقات: