ಮುಳ್ಳಯ್ಯನಗಿರಿ'ಗೆ ಬರುವ ಪ್ರವಾಸಿಗರೇ ಗಮನಿಸಿ : ಜಿಲ್ಲಾಡಳಿತದ ಈ ನಿಯಮ ಪಾಲನೆ ಕಡ್ಡಾಯ
ಚಿಕ್ಕಮಗಳೂರು : ಮಳೆ ಬರುವ ಸಂದರ್ಭದಲ್ಲಿ ಕಾಫಿನಾಡು ಚಿಕ್ಕಮಗಳೂರಿಗೆ ಬರುವುದೆಂದರೆ ಪ್ರವಾಸಿಗರಿಗೆ ಅದೇನೋ ಖುಷಿ.ಆದರೆ ಈ ಕೊರೊನಾ ಪ್ರವಾಸಿಗರಿಗೆ ಬೇಸರ ಉಂಟು ಮಾಡಿದೆ. ಚಿಕ್ಕಮಗಳೂರಿನ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಕೆಲವು ನಿರ್ಬಂಧ ಹೇರಲಾಗಿದೆ.
ಇದೀಗ ಮುಳ್ಳಯ್ಯನಗಿರಿ ಭಾಗಕ್ಕೆ ಬರುವ ಪ್ರವಾಸಿಗರು ಸ್ವಲ್ಪ ಪ್ಲಾನ್ ಮಾಡಿಕೊಂಡು ಬನ್ನಿ. ಯಾಕೆಂದರೆ ಬೆಳಗ್ಗೆ ಮೊದಲು ಬರುವ 150 ಗಾಡಿ, 600 ಪ್ರವಾಸಿಗರಷ್ಟೆ ಪಾಸ್ ಆಗುತ್ತಾರೆ. ಲೇಟಾಗಿ ಬಂದವರು ಚೆಕ್ಪೋಸ್ಟ್ ಬಳಿ ಲಾಕ್ ಆಗಬೇಕಾಗುತ್ತೆ.ಯಾಕೆಂದರೆ, ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ದಿನಕ್ಕೆ 300 ವಾಹನಗಳು ಹಾಗೂ 1,200 ಪ್ರವಾಸಿಗರನ್ನಷ್ಟೆ ಬಿಡಬೇಕೆಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದ್ದರಿಂದ ಮುಳ್ಳಯ್ಯನಗಿರಿ ಭಾಗಕ್ಕೆ ಬರುವ ಪ್ರವಾಸಿಗರು ಸ್ವಲ್ಪ ಪ್ಲಾನ್ ಮಾಡಿಕೊಂಡು ಬನ್ನಿ.
ಬೆಳಗ್ಗೆ 6-9 ಗಂಟೆವರೆಗೆ 150 ಗಾಡಿಗಳು, 600 ಜನ. ಮಧ್ಯಾಹ್ನ 2-4 ಗಂಟೆಯವರೆಗೆ 150 ಗಾಡಿ, 600 ಪ್ರವಾಸಿಗರಿಗೆ ಮಾತ್ರ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ದಿನಕ್ಕೆ 300 ವಾಹನ, 1,200 ಪ್ರವಾಸಿಗರನ್ನು ಮಾತ್ರ ಬಿಡಬೇಕು ಎಂದು ಚೆಕ್ಪೋಸ್ಟ್ ಸಿಬ್ಬಂದಿಗೆ ಸೂಚಿಸಿದೆ. ಅಂದಹಾಗೆ ಇಂದಿನಿಂದಲೇ ಈ ಆದೇಶ ಜಾರಿಗೆ ಬಂದಿದೆ.
0 التعليقات: