Sunday, 8 August 2021

ಕೊಟ್ಟಿರುವ ಖಾತೆಯಲ್ಲೇ ಮುಂದುವರಿಯುವೆ: ಸಚಿವ ಎಂ.ಟಿ.ಬಿ.ನಾಗರಾಜ್


 ಕೊಟ್ಟಿರುವ ಖಾತೆಯಲ್ಲೇ ಮುಂದುವರಿಯುವೆ: ಸಚಿವ ಎಂ.ಟಿ.ಬಿ.ನಾಗರಾಜ್

ಬೆಂಗಳೂರು: "ನಾನು ಯಾವುದೇ ಖಾತೆಗಾಗಿ ಬೇಡಿಕೆ ಇಟ್ಟಿಲ್ಲ. ಸದ್ಯ ನನಗೆ ಕೊಟ್ಟಿರುವ ಖಾತೆಯಲ್ಲೇ ಮುಂದುವರಿದು ಕೆಲಸ ಮಾಡುವೆ" ಎಂದು ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಇಂತಹದ್ದೇ ಖಾತೆ ನೀಡಿ ಅಂತ ಬೇಡಿಕೆ ಇಟ್ಟಿಲ್ಲ. ಈ ಹಿಂದೆ ವಸತಿ ಖಾತೆಯಂತಹ ಪ್ರಬಲ ಖಾತೆಯನ್ನು ನಿರ್ವಹಿಸಿದ್ದೆ. ಆದ್ದರಿಂದ ಜನರಿಗೆ ಹತ್ತಿರವಾಗುವಂತಹ ಖಾತೆ ನೀಡುವಂತೆ ಮನವಿ ಮಾಡಿದ್ದೆ. ಆದರೆ ಸದ್ಯ ಕೊಟ್ಟಿರುವ ಖಾತೆಯಲ್ಲೇ ಮುಂದುವರಿದು ಕೆಲಸ ಮಾಡಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ನೂತನ ಸಚಿವರಿಗೆ ಶನಿವಾರ ಖಾತೆ ಹಂಚಿಕೆ ಮಾಡಲಾಗಿದೆ. ಈ ವೇಳೆ ಪೌರಾಡಳಿತ ಖಾತೆ ಪಡೆದಿರುವ ಎಂ.ಟಿ.ಬಿ.ನಾಗರಾಜ್ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ್ದರು.

ಇದೇ ವಿಚಾರವಾಗಿ ಇಂದು ಮುಖ್ಯಮಂತ್ರಿಯನ್ನು ಭೇಟಿಯಾದ ಬಳಿಕ ಅವರು ಈಗ ಲಭಿಸಿರುವ ಖಾತೆಯಲ್ಲೇ ಮುಂದುವರಿಯಲಿದ್ದೇನೆ ಎಂದು ಹೇಳಿದ್ದಾರೆ.


SHARE THIS

Author:

0 التعليقات: