Friday, 6 August 2021

ದ.ಕ. ಸಹಿತ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬೊಮ್ಮಾಯಿ


 ದ.ಕ. ಸಹಿತ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್-19 ಹರಡುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯದ ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿನ ಕೊವಿಡ್ ಸ್ಥಿತಿಗತಿ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋಸ್ ಮತ್ತು ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಈ ಬಗ್ಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗುವುದು. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ಜಾರಿಯಾಗಲಿದೆ ಎಂದರು.


SHARE THIS

Author:

0 التعليقات: