Wednesday, 11 August 2021

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

 

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಹೊಸದಿಲ್ಲಿ: ಧಾರವಾಡಕ್ಕೆ ಭೇಟಿ ನೀಡದಿರುವುದೂ ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಅಜಯ್ ರಸ್ತೋಗಿ ಅವರಿದ್ದ ಪೀಠ ಜಾಮೀನು ನೀಡಿದೆ. ಸಿಬಿಐ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡರ್ ಅವರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಸಿಬಿಐನಿಂದ ನವೆಂಬರ್ 5,2020 ರಂದು ಬಂಧನಕ್ಕೆ ಒಳಗಾಗಿದ್ದರು.


SHARE THIS

Author:

0 التعليقات: