ಶಾಸಕ ಝಮೀರ್ ಅಹ್ಮದ್ ಮನೆ, ಕಚೇರಿ ಮೇಲೆ ಐಟಿ ದಾಳಿ
ಬೆಂಗಳೂರು : ಶಾಸಕ ಝಮೀರ್ ಅಹ್ಮದ್ ಮನೆ, ಕಚೇರಿ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ವಿವಿಧ ತಂಡಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸ್ಥಳೀಯ ಪೊಲೀಸ್ ಹಾಗೂ ಸಿಆರ್ಪಿಎಫ್ ಪಡೆ ಭದ್ರತೆ ಜೊತೆ ಈ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಗ್ಗೆ 6 ಗಂಟೆಗೆ ಝಮೀರ್ ಅಹ್ಮದ್ ಅವರ ಕಂಟೋನ್ಮೆಂಟ್ ಬಳಿ ಇರುವ ಮನೆ ಸೇರಿ ಕಚೇರಿ, ಫ್ಲ್ಯಾಟ್ ಹಾಗೂ ನ್ಯಾಷನಲ್ ಟ್ರಾವೆಲ್ಸ್ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
0 التعليقات: