Monday, 9 August 2021

ಎಸೆಸೆಲ್ಸಿ ಫಲಿತಾಂಶ ಪ್ರಕಟ


 ಎಸೆಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು : ಕಳೆದ ಜುಲೈನಲ್ಲಿ ನಡೆದ 2020-21ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಿಸಿದ್ದು, ಅಂಕ ಆಧಾರಿತ ಫಲಿತಾಂಶ ಪ್ರಕಟವಾಗಿದೆ.

ಪರೀಕ್ಷೆ ಬರೆದಿರುವ 8.76 ಲಕ್ಷ ವಿದ್ಯಾರ್ಥಿಗಳ ಪೈಕಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿರುವ ಆಧಾರದ ಮೇಲೆ ಪ್ರತಿಯೊಬ್ಬರ ಅಂಕ ಆಧಾರಿತ ಫಲಿತಾಂಶ https://sslc.karnataka.gov.in/,  kseeb.kar.nic.in, karresults.nic.in. ನಲ್ಲಿ ಲಭ್ಯವಿದೆ.

ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನೂತನ ಸಚಿವ ಬಿ.ಸಿ.ನಾಗೇಶ್‌ ಅವರು ಫಲಿತಾಂಶ ಪ್ರಕಟಿಸಿದರು.


SHARE THIS

Author:

0 التعليقات: