Monday, 9 August 2021

ಸಚಿವ ಸಂಪುಟ ವಿಸ್ತರಣೆ ನಂತರ ನಮ್ಮಲ್ಲಿ ಯಾವುದೇ ಅಸಮಧಾನ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ


 ಸಚಿವ ಸಂಪುಟ ವಿಸ್ತರಣೆ ನಂತರ ನಮ್ಮಲ್ಲಿ ಯಾವುದೇ ಅಸಮಧಾನ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಸಚಿವ ಸಂಪುಟ ವಿಸ್ತರಣೆ ನಂತರ ನಮ್ಮಲ್ಲಿ ಯಾವುದೇ ಅಸಮಧಾನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ನಗರದ ಚಾಮುಂಡಿ ಬೆಟ್ಟದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಅಸಮಧಾನ ಇಲ್ಲ, ಸಣ್ಣ ಪುಟ್ಟ ಸಮಸ್ಯೆ ಇರಬಹುದು ಅದನ್ನು ಕುಳಿತು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಶಾಸಕ ಎಸ್.ಎ.ರಾಮದಾಸ್ ಅಸಮಧಾನಗೊಂಡಿರುವ ಹಿನ್ನಲೆಯಲ್ಲಿ ಮಾತನಾಡಿದ ಸಿಎಂ, ರಾಮದಾಸ್ ಅವರು ಹಿರಿಯರು, ಅವರಿಗೆ ಯಾವುದೇ ಅಸಮಧಾನ ಇಲ್ಲ, ಅಂತಹದ್ದೇನಾದರು ಇದ್ದರೆ ಅವರ ಜೊತೆ ಮಾತನಾಡಿ ಸಮಾಧಾನ ಪಡಿಸುತ್ತೇನೆ ಎಂದು ಹೇಳಿದರು.

ಕ್ಯಾಬಿನೆಟ್ ಸ್ಥಾನಮಾನ ನಿರಾಕರಿಸಿರುವ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಮಾತನಾಡಿದ ಅವರು, ಇದನ್ನು ನಾನು ಒಪ್ಪಿಕೊಂಡಿದ್ದೇನೆ, ನಿಕಟಪೂರ್ವ ಮುಖ್ಯಮಂತ್ರಿಗಳಿಗೆ ಯಾವ ಸೌಲಭ್ಯ ನೀಡಲಾಗುತ್ತದೆ ಅದು ಮುಂದುವರಿಯುತ್ತದೆ ಎಂದು ಹೇಳಿದರು.


SHARE THIS

Author:

0 التعليقات: