Saturday, 7 August 2021

ಕಾರು ಅಪಘಾತ: ಸಚಿವರ ಸಭೆಗೆ ತೆರಳುತ್ತಿದ್ದ ಪಿಡಬ್ಲ್ಯುಡಿ ಎಂಜಿನಿಯರ್ ಮೃತ್ಯು; ನಾಲ್ವರಿಗೆ ಗಂಭೀರ ಗಾಯ


 ಕಾರು ಅಪಘಾತ: ಸಚಿವರ ಸಭೆಗೆ ತೆರಳುತ್ತಿದ್ದ ಪಿಡಬ್ಲ್ಯುಡಿ ಎಂಜಿನಿಯರ್ ಮೃತ್ಯು; ನಾಲ್ವರಿಗೆ ಗಂಭೀರ ಗಾಯ

ಕಾರವಾರ : ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಕಾರವಾರಕ್ಕೆ ಬರುತ್ತಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಬಾಳೇಗುಳಿ ಬಳಿ ಶನಿವಾರ ಅಪಘಾತಕ್ಕೀಡಾಗಿದೆ.

ಲೋಕೋಪಯೋಗಿ ಇಲಾಖೆಯ ಸಿದ್ದಾಪುರ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮುದುಕಣ್ಣನವರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಕೃಷ್ಣಾರೆಡ್ಡಿ, ಟೆಕ್ನಿಷಿಯನ್ ರವಿ ಪಾಟೀಲ ಹಾಗೂ ಇಲಾಖೆ ಸಿಬ್ಬಂದಿ ಚೇತನ್ ಇವರಿಗೆ ಅಂಕೋಲಾ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಚಾಲಕ ಗಾಯಗೊಂಡಿದ್ದಾರೆ. ಸಚಿವ ಶಿವರಾಮ ಹೆಬ್ಬಾರ ಅಂಕೋಲಾ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ಸಾಂತ್ವನ ಹೇಳಿದರು. ಗಂಭೀರ ಸ್ವರೂಪದ ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಿದರು.

ಅಪಘಾತದಲ್ಲಿ ಅಧಿಕಾರಿ ಮೃತಪಟ್ಟ ಕಾರಣ ಸಚಿವ ಹೆಬ್ಬಾರ ಅವರು ಸಭೆಯನ್ನು ರದ್ದು ಪಡಿಸಿದ್ದಾರೆ.


SHARE THIS

Author:

0 التعليقات: