Wednesday, 11 August 2021

ಬಿಜೆಪಿ ಶಾಸಕ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರ್ ಗಳಿಗೆ ಬೆಂಕಿ

ಬಿಜೆಪಿ ಶಾಸಕ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರ್ ಗಳಿಗೆ ಬೆಂಕಿ

ಬೆಂಗಳೂರು: ಬಿಜೆಪಿ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಎರಡು ಐಷಾರಾಮಿ ಕಾರ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ತಡರಾತ್ರಿ 1.30 ರ ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಬಂದು ಸತೀಶ್ ರೆಡ್ಡಿ ಮನೆ ಆವರಣದಲ್ಲಿದ್ದ ಎರಡು ಕಾರ್ ಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.SHARE THIS

Author:

0 التعليقات: