ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಚರ್ಚಿಸಲು ರವಿವಾರ ರಾತ್ರಿಯೇ ದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮವಾರ ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿ ಮಾಡಲಿದ್ದಾರೆ.
ಕಳೆದ ರಾತ್ರಿ 9ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರೊಂದಿಗೆ ದಿಲ್ಲಿಗೆ ತೆರಳಿರುವ ಬೊಮ್ಮಾಯಿ, ತಡರಾತ್ರಿವರೆಗೆ ದಿಲ್ಲಿಯ ಅಜ್ಞಾತ ಸ್ಥಳದಲ್ಲಿದ್ದು, ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಕೂಡಾ ಸಮಾಲೋಚನೆಯಲ್ಲಿ ಪಾಲ್ಗೊಂಡು, ಬೊಮ್ಮಾಯಿ ಅವರು ಸಿದ್ಧಪಡಿಸಿ ತಂದಿದ್ದ ಪಟ್ಟಿಯನ್ನು ಪರಾಮರ್ಶಿಸಿದರು ಎಂದು ತಿಳಿದುಬಂದಿದೆ.
0 التعليقات: