Saturday, 4 September 2021

ಮಹಾರಾಷ್ಟ್ರದಲ್ಲಿ ಒಂದೇ ದಿನ ಬರೋಬ್ಬರಿ 11.91 ಲಕ್ಷ ಜನರಿಗೆ ಕೊವಿಡ್ ಲಸಿಕೆ

 

ಮಹಾರಾಷ್ಟ್ರದಲ್ಲಿ ಒಂದೇ ದಿನ ಬರೋಬ್ಬರಿ 11.91 ಲಕ್ಷ ಜನರಿಗೆ ಕೊವಿಡ್ ಲಸಿಕೆ

ಮುಂಬೈ: ದೇಶಾದ್ಯಂತ ಕೊರೋನಾ ವಿರುದ್ಧ ಲಸಿಕಾ ಅಭಿಯಾನ ಚುರುಕಾಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ದಾಖಲೆಯ 11.91 ಲಕ್ಷ ಜನರಿಗೆ ಕೊವಿಡ್ -19 ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆಯು ಅಧಿಕೃತವಾಗಿ ಮಾಹಿತಿ ನೀಡಿದೆ.

ಸಾರ್ವಜನಿಕ ಆರೋಗ್ಯ ಇಲಾಖೆ ಹೊರಡಿಸಿದ ಪ್ರಕಟಣೆಯ ಪ್ರಕಾರ, ಶನಿವಾರ 11,91,921 ಜನರು ಲಸಿಕೆ ಪಡೆದಿದ್ದಾರೆ. ಇಲ್ಲಿವರೆಗೆ ಒಟ್ಟು 6.27 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇಲಾಖೆಯ ಪ್ರಕಾರ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಲಾಗುತ್ತಿದೆ, ಎರಡನೆ ಸ್ಥಾನದಲ್ಲಿ ಮಹಾರಾಷ್ಟ್ರ ಇದೆ ಎಂದು ತಿಳಿದು ಬಂದಿದೆ.SHARE THIS

Author:

0 التعليقات: