Thursday, 2 September 2021

ಕೊಲ್ಲಂ ಕರಾವಳಿಯಲ್ಲಿ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತ್ಯು,12 ಜನರ ರಕ್ಷಣೆ


 ಕೊಲ್ಲಂ ಕರಾವಳಿಯಲ್ಲಿ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತ್ಯು,12 ಜನರ ರಕ್ಷಣೆ

ಕೊಲ್ಲಂ: ಕೊಲ್ಲಂ ಕರಾವಳಿಯ ಅಝೀಕಲ್ ಬಳಿ ಗುರುವಾರ ಮುಂಜಾನೆ ಮೀನುಗಾರಿಕಾ ದೋಣಿ ಮಗುಚಿ ಬಿದ್ದು ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ.

ಕಾಯಂಕುಳಂ ನಿವಾಸಿಗಳಾದ ಸುದೇವನ್ (51), ಸುನೀಲ್ ದತ್ (24), ಓಚಿರಾ ನಿವಾಸಿಗಳಾದ ಶ್ರೀಕುಮಾರ್ (45) ಹಾಗೂ ನೆಡಿಯತ್‌ನ ತಂಕಪ್ಪನ್ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೆಳಿಗ್ಗೆ 5.30 ರ ಸುಮಾರಿಗೆ ಮೀನುಗಾರಿಕೆಗೆ ಅಲಪುಳದ ವಲಿಯಾ ಅಝೀಕಲ್ ಕರಾವಳಿಯಿಂದ ಹೊರಟ 'ಓಮಕರಂ' ಹೆಸರಿನ ದೋಣಿಯಲ್ಲಿ 16 ಮೀನುಗಾರರಿದ್ದರು. ಕರಾವಳಿ ಪೊಲೀಸರ ಪ್ರಕಾರ, ಅಝೀಕಲ್ ಬಂದರಿನಿಂದ ಐದು ನಾಟಿಕಲ್ ಮೈಲಿ ದೂರದಲ್ಲಿರುವ ಕೊಲ್ಲಂನ ಅಝೀಕಲ್ ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮೀನುಗಾರರು ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದಾಗ ದೋಣಿ ಅಪಘಾತಕ್ಕೀಡಾಗಿದೆ. ಬಲವಾದ ಗಾಳಿಯಿಂದಾಗಿ ದೋಣಿ ಮಗುಚಿದೆ ಎಂದು ಹೇಳಲಾಗಿದೆ. ದಡದಲ್ಲಿ ಅನೇಕ ಮೀನುಗಾರರು ಇದ್ದ ಕಾರಣ, ಅವರು ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದರು.


SHARE THIS

Author:

0 التعليقات: