Sunday, 12 September 2021

ಭಾರತದಲ್ಲಿ 24ಗಂಟೆಯಲ್ಲಿ 27,254 ಕೋವಿಡ್ ಪ್ರಕರಣ , ಕೇರಳದಲ್ಲಿ 20 ಸಾವಿರ ಪ್ರಕರಣ ಪತ್ತೆ

ಭಾರತದಲ್ಲಿ 24ಗಂಟೆಯಲ್ಲಿ 27,254 ಕೋವಿಡ್ ಪ್ರಕರಣ , ಕೇರಳದಲ್ಲಿ 20 ಸಾವಿರ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ಎರಡು ದಿನಗಳಿಂದ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 27,254 ಕೋವಿಡ್ ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 27,254 ಕೋವಿಡ್ ಪ್ರಕರಣ ವರದಿಯಾಗಿದ್ದು, 219 ಮಂದಿ ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ದಾಖಲೆಯ 20,240 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 67 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,652ರಷ್ಟು ಇಳಿಕೆಯಾಗಿದ್ದು, ಇದರೊಂದಿಗೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,74,269ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,42,874ಕ್ಕೆ ಇಳಿಕೆಯಾಗಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.1.16ರಷ್ಟು ಇಳಿಕೆಯಾಗಿದೆ. ಅಲ್ಲದೇ ಕೋವಿಡ್ ಚೇತರಿಕೆ ಪ್ರಮಾಣ ಶೇ.97.51ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ವಿವರಿಸಿದೆ. ಕಳೆದ 24ಗಂಟೆಗಳಲ್ಲಿ 10,652ರಷ್ಟು ಸಕ್ರಿಯ ಪ್ರಕರಣ ಇಳಿಕೆಯಾಗಿದೆ.SHARE THIS

Author:

0 التعليقات: