Friday, 10 September 2021

ಸೆ. 30 ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವ ಗುರಿ : ಕೇರಳ ಸಿಎಂ

 

ಸೆ. 30 ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವ ಗುರಿ : ಕೇರಳ ಸಿಎಂ

ತಿರುವನಂತಪುರಂ: ಕೇರಳದಲ್ಲಿ ಒಂದೆಡೆ ಕೊರೋನ ಪ್ರಕರಣಗಳು ನಿರಂತರ ಏರಿಕೆ ಕಾಣುತ್ತಿದೆ . ರಾಜ್ಯದಲ್ಲಿ ನಿನ್ನೆ ಒಂದೇ ದಿನ 25 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಇದರ ನಡುವೆ ರಾಜ್ಯ ಸರ್ಕಾರ ಸೆಪ್ಟೆಂಬರ್ 30 ರೊಳಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ನೀಡುವ ಗುರಿ ಹೊಂದಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶುಕ್ರವಾರ ಹೇಳಿದ್ದಾರೆ.

ಇಲ್ಲಿಯವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ಶೇ .78.03 ರಷ್ಟು ಜನರು ಮೊದಲ ಡೋಸ್ ಲಸಿಕೆ ಪಡೆದರೆ, ಶೇ.30.16 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ವಿಜಯನ್ ತಿಳಿಸಿದ್ದಾರೆ.

45 ವರ್ಷಕ್ಕಿಂತ ಮೇಲ್ಪಟ್ಟ ಶೇ. 93 ರಷ್ಟು ಜನರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದರೆ, ಶೇ. 50 ರಷ್ಟು ಜನರು ಎರಡನೇ ಡೋಸ್ ಅನ್ನು ಪಡೆದಿದ್ದಾರೆ ಎಂದು ವಿಜಯನ್ ಹೇಳಿದರು.



SHARE THIS

Author:

0 التعليقات: