Saturday, 11 September 2021

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ : 4 ದಿನ ಯೆಲ್ಲೋ ಅಲರ್ಟ್ ಘೋಷಣೆ

 

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ : 4 ದಿನ ಯೆಲ್ಲೋ ಅಲರ್ಟ್ ಘೋಷಣೆ

ಕೊಡಗು : ಕೊಡಗು ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಟ್ಟ, ಗುಡ್ಡ, ತಗ್ಗು ಪ್ರದೇಶದ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆಪ್ಟೆಂಬರ್ 15 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


SHARE THIS

Author:

0 التعليقات: