Sunday, 5 September 2021

44 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್


 44 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಹೊಸದಿಲ್ಲಿ: ಹೊಸ ಬೋಧನಾ ವಿಧಾನಗಳನ್ನು ಅಭಿವೃದ್ಧಿಪಡಿಸುವಲ್ಲಿ ತಮ್ಮ ಕೊಡುಗೆಗಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರವಿವಾರ ದೇಶದಾದ್ಯಂತದ 44 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.

"ಪ್ರತಿ ವಿದ್ಯಾರ್ಥಿಯು ವಿಭಿನ್ನ ಸಾಮರ್ಥ್ಯ, ಪ್ರತಿಭೆ ಮತ್ತು ಮನೋವಿಜ್ಞಾನ, ಸಾಮಾಜಿಕ ಸಂರಚನ ಹಾಗೂ  ಹಿನ್ನೆಲೆಯನ್ನು ಹೊಂದಿದ್ದಾರೆ ಎಂಬುದನ್ನು ಶಿಕ್ಷಕರು ನೆನಪಿನಲ್ಲಿಟ್ಟುಕೊಳ್ಳಬೇಕು. ಆದ್ದರಿಂದ, ಅವರು ಮಗುವಿನ ಅಗತ್ಯತೆಗಳು, ಆಸಕ್ತಿಗಳು ಮತ್ತು ಸಾಮರ್ಥ್ಯಗಳಿಗೆ ಅನುಗುಣವಾಗಿ ಪ್ರತಿ ಮಗುವಿನ ಸರ್ವತೋಮುಖ ಅಭಿವೃದ್ಧಿಯತ್ತ ಗಮನ ಹರಿಸಬೇಕು" ಎಂದು ಆನ್‌ಲೈನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಹೇಳಿದರು.


SHARE THIS

Author:

0 التعليقات: