ಅ.7ಕ್ಕೆ ಮಂಗಳೂರಿಗೆ ರಾಷ್ಟ್ರಪತಿ
ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ 9ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅ.7ರಿಂದ 9ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ.
ಅ.7ರಂದು ಚಾಮರಾಜನಗರದಲ್ಲಿ ಆಸ್ಪತ್ರೆ ಉದ್ಘಾಟನೆ ಬಳಿಕ ಮಂಗಳೂರಿಗೆ ಬಂದು ಇಲ್ಲಿ ವಾಸ್ತವ್ಯ ಮಾಡಲಿದ್ದಾರೆ. 8ರ ಬೆಳಿಗ್ಗೆ 10.45ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಶೃಂಗೇರಿಗೆ ತೆರಳುವರು. ಪುನಃ ಮಂಗಳೂರಿಗೆ ಬಂದು, ಇಲ್ಲಿ ವಾಸ್ತವ್ಯ ಮಾಡಿ, 9ರ ಬೆಳಿಗ್ಗೆ 11.15ಕ್ಕೆ ವಿಮಾನದ ಮೂಲಕ ರಾಷ್ಟ್ರಪತಿ ಭವನಕ್ಕೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
ವಿಡಿಯೊ ಸಂವಾದ: ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಮುಖರ ಜತೆ ವಿಡಿಯೊ ಸಂವಾದ ನಡೆಸಿದರು. 'ರಾಷ್ಟ್ರಪತಿಗಳ ಊಟೋಪಚಾರ, ವಸತಿ, ಭದ್ರತೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗುವುದು. ಯಾವುದೇ ರೀತಿಯ ಲೋಪ ಆಗದಂತೆ ಎಚ್ಚರ ವಹಿಸಲಾಗುವುದು' ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು. ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಹರಿರಾಂ ಶಂಕರ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಮಿಶ್ರ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಯಶವಂತ್ ಉಪಸ್ಥಿತರಿದ್ದರು.
0 التعليقات: