Sunday, 12 September 2021

ರಾಜ್ಯದಲ್ಲಿಂದು 803 ಮಂದಿಗೆ ಕೊರೋನ ದೃಢ, 17 ಮಂದಿ ಸಾವು


 ರಾಜ್ಯದಲ್ಲಿಂದು 803 ಮಂದಿಗೆ ಕೊರೋನ ದೃಢ, 17 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ರವಿವಾರ 803 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 17 ಜನರು ಸೋಂಕಿಗೆ ಬಲಿಯಾಗಿದ್ದು, 802 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,61,735ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,504ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 16,656ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

17 ಸೋಂಕಿತರು ಬಲಿ: ಬೆಳಗಾವಿ 2, ಬೆಂಗಳೂರು ನಗರ 6, ದಕ್ಷಿಣ ಕನ್ನಡ 2, ಹಾಸನ 2, ಕೊಡಗು 1, ಮೈಸೂರು 2, ಉಡುಪಿ 1, ಉತ್ತರ ಕನ್ನಡ  ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 803 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 4, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 255, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 14, ಚಿತ್ರದುರ್ಗ 4, ದಕ್ಷಿಣ ಕನ್ನಡ 153, ದಾವಣಗೆರೆ 9, ಧಾರವಾಡ 9, ಹಾಸನ 30, ಹಾವೇರಿ 1, ಕಲಬುರಗಿ 2, ಕೊಡಗು 63, ಕೋಲಾರ 8, ಮಂಡ್ಯ 11, ಮೈಸೂರು 36, ರಾಯಚೂರು 2, ರಾಮನಗರ 1, ಶಿವಮೊಗ್ಗ 24, ತುಮಕೂರು 22, ಉಡುಪಿ 90, ಉತ್ತರ ಕನ್ನಡ  ಜಿಲ್ಲೆಯಲ್ಲಿ 28 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 255 ಜನರಿಗೆ ಕೊರೋನ ದೃಢ

 ರಾಜಧಾನಿಯಲ್ಲಿ ರವಿವಾರದಂದು 255 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 6 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,41,425  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,053 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 1218000 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 


SHARE THIS

Author:

0 التعليقات: