ಉಡುಪಿ : ದಿನದಲ್ಲಿ 96ಕ್ಕಿಳಿದ ಕೋವಿಡ್ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಸೋಂಕಿಗೆ ಕೋವಿಡ್ ಸೋಂಕಿಗೆ ಪಾಸಿಟಿವ್ ದೃಢಗೊಂಡವರ ಸಂಖ್ಯೆ 96ಕ್ಕಿಳಿದಿದೆ. ಇಂದು ಸಹ ಸೋಂಕಿಗೆ ಯಾರೂ ಬಲಿಯಾಗಿಲ್ಲ. ಇಂದು ಒಟ್ಟು 7197 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 96 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದಿನದಲ್ಲಿ 55 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಸೋಂಕಿಗೆ ಸಕ್ರಿಯ ರಾಗಿರುವವರ ಸಂಖ್ಯೆ 1487ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಕೊರೋನ ಸೋಂಕು ದೃಢಪಟ್ಟ 96 ಮಂದಿಯಲ್ಲಿ 44 ಮಂದಿ ಪುರುಷರಾದರೆ, 52 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 59 ಮಂದಿ ಉಡುಪಿ ತಾಲೂಕು, 15 ಮಂದಿ ಕುಂದಾಪುರ ಹಾಗೂ 21 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಯ ಒಬ್ಬರು ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 16 ಮಂದಿಯನ್ನು ಕೋವಿಡ್ ಆಸ್ಪತ್ರೆಗೆ ಸೇರಿಸಿದರೆ, 80 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಗುರುವಾರ 55 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 73,018ಕ್ಕೇರಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 74,954ಕ್ಕೇರಿದೆ. ಇಂದಿನವರೆಗೆ ಜಿಲ್ಲೆಯಲ್ಲಿ ಒಟ್ಟು 10,39,143 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
406 ಡೋಸ್ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ಶುಕ್ರವಾರ 406 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 192 ಮಂದಿ ಮೊದಲ ಡೋಸ್ ಹಾಗೂ 214 ಮಂದಿ ಎರಡನೇ ಡೋಸ್ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 141 ಮಂದಿ ಮೊದಲ ಹಾಗೂ 125 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 51 ಮಂದಿಗೆ ಮೊದಲ ಹಾಗೂ 89 ಮಂದಿಗೆ ಎರಡೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಶುಕ್ರವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 8,28,194 ಮಂದಿ ಮೊದಲ ಡೋಸ್ನ್ನು ಪಡೆದರೆ, 3,06,837 ಮಂದಿ ಎಡರೂ ಡೋಸ್ಗಳನ್ನು ಸ್ವೀಕರಿಸಿದ್ದಾರೆ.
0 التعليقات: