Monday, 6 September 2021

ರಾಜ್ಯದಲ್ಲಿಂದು 973 ಮಂದಿಗೆ ಕೊರೋನ ದೃಢ, 17 ಮಂದಿ ಸಾವು


 ರಾಜ್ಯದಲ್ಲಿಂದು 973 ಮಂದಿಗೆ ಕೊರೋನ ದೃಢ, 17 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 973 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 17 ಜನರು ಸೋಂಕಿಗೆ ಬಲಿಯಾಗಿದ್ದು, 1,071 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,56,137ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,426ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 17,386ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

17 ಸೋಂಕಿತರು ಬಲಿ: ಬಾಗಲಕೋಟೆ 1, ಬೆಂಗಳೂರು ನಗರ 8, ದಕ್ಷಿಣ ಕನ್ನಡ 2, ಹಾಸನ 1, ಹಾವೇರಿ 2, ತುಮಕೂರು 1, ಉಡುಪಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 973 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 6, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 243, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 30, ಚಿತ್ರದುರ್ಗ 10, ದಕ್ಷಿಣ ಕನ್ನಡ 258, ದಾವಣಗೆರೆ 7, ಧಾರವಾಡ 6, ಹಾಸನ 62, ಕಲಬುರಗಿ 8, ಕೊಡಗು 52, ಕೋಲಾರ 12, ಕೊಪ್ಪಳ 1, ಮಂಡ್ಯ 11, ಮೈಸೂರು 78, ರಾಯಚೂರು 1, ರಾಮನಗರ 1, ಶಿವಮೊಗ್ಗ 37, ತುಮಕೂರು 31, ಉಡುಪಿ 53, ಉತ್ತರ ಕನ್ನಡ 31, ವಿಜಯಪುರ  ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ರಾಜಧಾನಿಯಲ್ಲಿ 243 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರದಂದು 243 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 8 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,39,724 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16032 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,16,511 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.


SHARE THIS

Author:

0 التعليقات: