Friday, 3 September 2021

ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು, ಗಣಪತಿ ಉತ್ಸವ ನಡೆಸಿಯೇ ನಡೆಸುತ್ತೇವೆ: ಸಚಿವ ಈಶ್ವರಪ್ಪ


 ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು, ಗಣಪತಿ ಉತ್ಸವ ನಡೆಸಿಯೇ ನಡೆಸುತ್ತೇವೆ: ಸಚಿವ ಈಶ್ವರಪ್ಪ

ಶಿವಮೊಗ್ಗ,: ಜನರ ಆರೋಗ್ಯ ಮತ್ತು ಗಣೇಶೋತ್ಸವದ ಕಡೆಗೂ ಗಮನ ನೀಡಬೇಕೆಂಬುದು ನನ್ನ ಅಭಿಪ್ರಾಯ.ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು, ಗಣಪತಿ ಉತ್ಸವ ನಡೆಸಿಯೇ ನಡೆಸುತ್ತೇವೆ. ಗಣಪತಿ ಉತ್ಸವ ಯಶಸ್ವಿಯಾಗಿ ಪೂರೈಸಬೇಕೆಂಬುದು ನಮ್ಮ ಆಶಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ಉತ್ಸವ ಪೂರ್ಣ ಯಶಸ್ವಿಯಾಗಿ ನಡೆಸಲು ಸರ್ಕಾರ ಬೆಂಬಲ ನೀಡಲಿದೆ ಎಂದ ಅವರು,ರಾಜ್ಯದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಜನ ಸೇರಿಸಿದ್ದನ್ನು ನಾನು ಒಪ್ಪುವುದಿಲ್ಲ. ರಾಜ್ಯದ ಒಬ್ಬ ಜವಾಬ್ದಾರಿ ಮಂತ್ರಿಯಾಗಿ ಇದನ್ನು ನಾನು ಒಪ್ಪುವುದಿಲ್ಲ. ಹಾಗೆಯೇ, ಗಣೇಶೋತ್ಸವ ನಿಲ್ಲಿಸಬೇಕೆಂಬುದು ಕೂಡ ನಾನು ಒಪ್ಪುವುದಿಲ್ಲ' ಎಂದರು.

'ಕೋವಿಡ್ ಕಾರಣದಿಂದಾಗಿ, ಕೆಲವು ನೀತಿ, ನಿಯಮಗಳಡಿಯಲ್ಲಿ ಈ ಬಾರಿಯೂ ಗಣೇಶೋತ್ಸವ ನಡೆಸುತ್ತೇವೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಇದಕ್ಕೆ ನೀತಿ ನಿಯಮ ಜಾರಿಗೆ ತರಲಾಗುತ್ತದೆ. ಗಣಪತಿ ಉತ್ಸವ ಪೂರ್ಣ ಯಶಸ್ವಿಯಾಗಿ ನಡೆಸಲು ಸರ್ಕಾರ ಬೆಂಬಲ ನೀಡಲಿದೆ' ಎಂದರು.

'ಸಿಎಂ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ ಅಮಿತ್ ಶಾ ಯಾವ ರೀತಿ ಹೇಳಿದ್ದಾರೆ, ಏನ್ ಹೇಳಿದ್ದಾರೋ ನೋಡೋಣ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

'ಈ ಬಗ್ಗೆ ಒಟ್ಟಿಗೆ ಕೂತು ನಾವೆಲ್ಲಾ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಾಮೂಹಿಕ ನಾಯಕತ್ವದ ಬಗ್ಗೆ ಖಂಡಿತ ನಮ್ಮೆಲ್ಲರ ಒಲವು ಇದೆ. ಇದರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರದ್ದು ಪಾತ್ರ ಇರುತ್ತದೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಸಂಘಟನೆ ಕಟ್ಟುತ್ತಿದ್ದಾರೆ. ಏನೇ ಆದರೂ, ನಾವು ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ' ಎಂದು ತಿಳಿಸಿದರು. 

ರಾಜ್ಯದಲ್ಲಿ ನಡೆಯುತ್ತಿರುವ ಪಾಲಿಕೆಯ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿಯೇ ಗೆಲುವು ಸಾಧಿಸಲಿದೆ. ಹುಬ್ಬಳಿ-ಧಾರವಾಡ, ಬೆಳಗಾವಿ, ಕಲ್ಬುರ್ಗಿಗೆ ನಾನು ಹೋಗಿ ಬಂದಿದ್ದೇನೆ. ಅಲ್ಲಿನ ಜನರ ಒಲವು ಬಿಜೆಪಿ ಪರ ಇದೆ. ಎಲ್ಲಾ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


SHARE THIS

Author:

0 التعليقات: