Thursday, 9 September 2021

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಆದೇಶ


 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಪಾಸಿಟಿವ್ ರೇಟ್ 2ಕ್ಕಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ಜಿಲ್ಲಾಧಿಕಾರಿ ರಾಜೇಂದ್ರ ಅವರು ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೆ ಕರ್ಫ್ಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಜಿಲ್ಲೆಯಲ್ಲಿ ಶೇ. 2.04 ಪಾಸಿಟಿವ್ ರೇಟ್ ದಾಖಲಾಗಿತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಗುರುವಾರ ರಾಜ್ಯ ಸರಕಾರ ಸೆ.13ರವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27ರವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.


SHARE THIS

Author:

0 التعليقات: