ಬಂಟ್ವಾಳ: ನೀರು ಎಂದು ಪೆಟ್ರೋಲ್ ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು
ಬಂಟ್ವಾಳ: ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದು ಅಸ್ವಸ್ಥಗೊಂಡಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತಾಲೂಕಿನ ಪೆರ್ನೆ ಸಂಪದಕೋಡಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ನಿವಾಸಿ ಪದ್ಮಾವತಿ (79) ಮೃತ ಮಹಿಳೆ. ಬಂಟ್ವಾಳದಿಂದ ಪೆರ್ನೆಯಲ್ಲಿರುವ ತನ್ನ ಮಗಳ ಮನೆಗೆ ತೆರಳಿದ್ದ ಅವರು ಹುಲ್ಲು ಕತ್ತರಿಸುವ ಯಂತ್ರದ ಬಳಕೆಯ ಉದ್ದೇಶದಿಂದ ಬಾಟಲಿಯಲ್ಲಿ ತಂದಿರಿಸಿದ್ದ ಪೆಟ್ರೋಲನ್ನು ನೀರು ಎಂದು ಭಾವಿಸಿ ಕುಡಿದು ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ. ಅವರು ದೃಷ್ಟಿ ದೋಷ ಹೊಂದಿದ್ದರು. ಸೆ. 26ರಂದು ಈ ಘಟನೆ ನಡೆದಿದ್ದು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಮೃತಪಟ್ಟಿದ್ದಾರೆ.
ಮೃತರ ಅಳಿಯ ಉಮಾನಾಥ್ ನೀಡಿದ ದೂರಿನಂತೆ ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 التعليقات: