Friday, 3 September 2021

ಬಂಟ್ವಾಳ; ಜೀಪ್ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು


 ಬಂಟ್ವಾಳ; ಜೀಪ್ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲೂಕಿನ ನಾವೂರದಲ್ಲಿ ನಡೆದಿದೆ‌.

ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ.

ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ ಎದುರಿನಲ್ಲಿ ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರನಿಗೆ ಗಂಭೀರ ಸ್ವರೂಪದ ಗಾಯವುಂಟಾಗಿತ್ತು. ಕೂಡಲೇ  ಅಬ್ಬಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ. ರಾಜೇಶ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


SHARE THIS

Author:

0 التعليقات: