Monday, 13 September 2021

ಮಂಗಳೂರು: ಚಿನ್ನ ಅಕ್ರಮ ಸಾಗಾಟ ಯತ್ನ; ಆರೋಪಿ ಸೆರೆ

 

ಮಂಗಳೂರು: ಚಿನ್ನ ಅಕ್ರಮ ಸಾಗಾಟ ಯತ್ನ; ಆರೋಪಿ ಸೆರೆ

ಮಂಗಳೂರು :  ಕುಕ್ಕರ್ ಒಳಗಡೆ ಅಡಗಿಸಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

5.58 ಲಕ್ಷ ರೂ. ಬೆಲೆಯ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದುಬೈನಿಂದ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದಿದ್ದಾನೆ. ಈತನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆಗೊಳಪಡಿಸಿದ್ದಾರೆ. ಈ ಸಂದರ್ಭ ಈತನ ಬಳಿಯಿದ್ದ ಎಗ್ ಕುಕ್ಕರ್‌ನ್ನು ಪರಿಶೀಲಿಸಿದಾಗ, ಅದರಲ್ಲಿ ಚಿನ್ನ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಅದರಲ್ಲಿ 116.400 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 5,58,720 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.


SHARE THIS

Author:

0 التعليقات: