ಮಂಗಳೂರು : ದುಷ್ಕರ್ಮಿಯಿಂದ ಮೂವರು ಮಹಿಳೆಯರ ಮೇಲೆ ಹಲ್ಲೆ
ಮಂಗಳೂರು : ನಗರದ ಜೈಲ್ ಬಳಿಯ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ಹಲ್ಲೆ ನಡೆಸಿರುವು ದಾಗಿ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ತಿಳಿಸಿದ್ದಾರೆ.
ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲವಾರು ಮಾದರಿಯ ಆಯುಧದಿಂದ ಏಕಾಏಕಿಯಾಗಿ ಸಂಸ್ಥೆಯೊಳಗೆ ನುಗ್ಗಿದ ವ್ಯಕ್ತಿ ಹಲ್ಲೆ ನಡೆಸಿದ್ದು, ನಿರ್ಮಲ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
0 التعليقات: