Friday, 10 September 2021

'ಪಠ್ಯ'ದಲ್ಲಿನ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ರಾಜ್ಯ ಸರ್ಕಾರದಿಂದ 'ಉನ್ನತ ಮಟ್ಟದ ಸಮಿತಿ' ರಚನೆ ಸಾಧ್ಯತೆ


 'ಪಠ್ಯ'ದಲ್ಲಿನ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ರಾಜ್ಯ ಸರ್ಕಾರದಿಂದ 'ಉನ್ನತ ಮಟ್ಟದ ಸಮಿತಿ' ರಚನೆ ಸಾಧ್ಯತೆ

ಬೆಂಗಳೂರು : ಪಠ್ಯಕ್ರಮದಲ್ಲಿನ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯದಲ್ಲಿರುವ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಲಿದೆ. ವೈದಿಕ ಧರ್ಮವನ್ನು ಮೀರಿ ಹೊಸ ಧರ್ಮಗಳು ಉದಯಿಸಿದ ವಿವರಗಳು ಪಠ್ಯ ಪುಸ್ತದಲ್ಲಿದೆ, ಆದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇಂತಹ ಅಂಶಗಳನ್ನು ಪಠ್ಯ ಪುಸ್ತಕದಿಂದ ತೆಗೆದುಹಾಕುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಈ ಬಗ್ಗೆ ಸಮಿತಿ ರಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಸದಸ್ಯರು ಭೇಟಿಯಾಗಿ ಸಮಾಜ ವಿಜ್ಞಾನ ಪಠ್ಯ ಪುಸ್ತದಕದಲ್ಲಿನ ಕೆಲವು ಅಂಶಗಳನ್ನು ತೆಗೆದುಹಾಕುವಂತೆ ಮನವಿ ಮಾಡಿತ್ತು ಎನ್ನಲಾಗಿದೆ.ಈ ನಿಟ್ಟಿನಲ್ಲಿ ಇದೀಗ ಬೊಮ್ಮಾಯಿ ಸರ್ಕಾರ ಈ ಕುರಿತು ಚಿಂತನೆ ನಡೆಸಿದೆ.ಅದೇನೆ ಇರಲಿ ಮುಂದಿನ ದಿನಗಳಲ್ಲಿ ಪಠ್ಯಕ್ರಮದಲ್ಲಿನ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಸಮಿತಿ ರಚಿಸಲಿದೆ.


SHARE THIS

Author:

0 التعليقات: