ಜೈಲುಗಳಲ್ಲಿ ಮೂಲ ಸೌಕರ್ಯ ಕೊರತೆ: ವಿವರಣೆ ನೀಡಲು ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿನ ಜೈಲುಗಳಲ್ಲಿ ಮೂಲಸೌಕರ್ಯಗಳ ಕೊರತೆ ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ವರದಿಗೆ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ರಾಜ್ಯದ ಕಾರಾಗೃಹಗಳಲ್ಲಿನ ಮೂಲಸೌಕರ್ಯ ಕೊರತೆ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ದಾಖಲಿಸಿರುವ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.
ಈ ವೇಳೆ, ಕಾನೂನು ಸೇವಾ ಪ್ರಾಧಿಕಾರ ಮತ್ತು ಸರಕಾರದ ವಾದ ಆಲಿಸಿದ ಪೀಠ, ಪ್ರಾಧಿಕಾರದ ವರದಿಯಲ್ಲಿ ಜೈಲುಗಳಲ್ಲಿ ಮೂಲ ಸೌಕರ್ಯದ ಕೊರತೆ ಸೇರಿ ಹಲವು ನ್ಯೂನತೆಗಳನ್ನು ಪಟ್ಟಿ ಮಾಡಲಾಗಿದೆ. ಆ ಪ್ರತಿಯೊಂದು ಅಂಶಗಳಿಗೂ ಉತ್ತರ ಒಳಗೊಂಡ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿತು.
0 التعليقات: