Saturday, 11 September 2021

ದೇಶಾದ್ಯಂತ ಇಂದು ನೀಟ್ ಪರೀಕ್ಷೆ;

ದೇಶಾದ್ಯಂತ ಇಂದು ನೀಟ್ ಪರೀಕ್ಷೆ;

ನವದೆಹಲಿ(ಸೆ.12): ಇಂದು ಬಹು ನಿರೀಕ್ಷಿತ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET-2021) ನಡೆಯಲಿದ್ದು, ದೇಶಾದ್ಯಂತ ಸುಮಾರು 16 ಲಕ್ಷ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 2-5 ಗಂಟೆಯವರೆಗೆ ಭಾರತದಾದ್ಯಂತ 202 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೊಠಡಿಗಳಲ್ಲಿ ಕೋವಿಡ್​ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ, ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ನಕಲು ತಂತ್ರಗಳಿಗೆ ಯಾವುದೇ ಅವಕಾಶವಿರುವುದಿಲ್ಲ. ಕಟ್ಟುನಿಟ್ಟಿನ ನಿಯಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತದೆ.ಕರ್ನಾಟಕದಲ್ಲಿ ಒಟ್ಟು 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾಂ, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹುಬ್ಬಳ್ಳಿ, ಮೈಸೂರು, ಮಂಗಳೂರು ಮತ್ತು ಉಡುಪಿಯಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 180 ಪ್ರಶ್ನೆಗಳು, ಪ್ರತೀ ಪ್ರಶ್ನೆಗೆ 4 ಅಂಕಗಳಂತೆ, ಒಟ್ಟು 720 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಪ್ರತೀ ಪ್ರಶ್ನೆಯ ತಪ್ಪು ಉತ್ತರಕ್ಕೆ ಒಂದು ನೆಗೆಟಿವ್ ಅಂಕ ಕಡಿತ ಮಾಡಲಾಗುತ್ತದೆ. 3 ಗಂಟೆಗಳ ಕಾಲ ಪರೀಕ್ಷೆ ನಡೆಯಲಿದೆ.


SHARE THIS

Author:

0 التعليقات: