Friday, 10 September 2021

ಮುಂಬೈನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

ಮುಂಬೈನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

ಮುಂಬೈ : ಮುಂಬೈನಲ್ಲಿ ಅನಾಗರಿಕ ಘಟನೆ ನಡೆದಿದ್ದು, ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ಆಕೆಯ ಗುಪ್ತಾಂಗದಲ್ಲಿ ರಾಡ್ ಅನ್ನು ತೂರಿಸಿದ ಘಟನೆ ನಡೆದಿದ್ದು, ಮಹಿಳೆಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.

ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಇದರಲ್ಲಿ 32 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿದ್ದಾನೆ, ಅವನು ಅವಳ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ, ಆದರೆ ಹೆಚ್ಚಿನ ಜನರು ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ಅವರು ಶಂಕಿಸಿದ್ದಾರೆ.

ಮುಂಬೈನ ಸಾಕಿ ನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ತನಿಖೆ ನಡೆಯುವಾಗ ಡಿಸಿಪಿ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು ಸ್ಥಳಕ್ಕೆ ತಲುಪಿದ್ದಾರೆ.

ಮುಂಬೈ ಪೊಲೀಸರ ಪ್ರಕಾರ, ಸಾಕಿ ನಾಕಾದಲ್ಲಿನ ಖೈರಾನಿ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಮಹಿಳೆಯ ಬಗ್ಗೆ ಮುಂಜಾನೆ 3.30 ಕ್ಕೆ ಮುಖ್ಯ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ.

ಪೊಲೀಸರು ಸ್ಥಳಕ್ಕೆ ತಲುಪಿ ಘಾಟ್ಕೋಪರ್ ನ ರಾಜವಾಡಿ ಆಸ್ಪತ್ರೆಗೆ ಕರೆದೊಯ್ದರು. ಮಹಿಳೆಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376(ಅತ್ಯಾಚಾರಕ್ಕೆ ಶಿಕ್ಷೆ) ಮತ್ತು 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



SHARE THIS

Author:

0 التعليقات: