Monday, 13 September 2021

ಮನೆಗೆಲಸದವಳ ಮೇಲೆ ಅತ್ಯಾಚಾರ: ಬಿಜೆಪಿ ನಾಯಕ ಬಾಬುಲಾಲ್ ಮರಾಂಡಿಯ ರಾಜಕೀಯ ಸಲಹೆಗಾರನ ಬಂಧನ

ಮನೆಗೆಲಸದವಳ ಮೇಲೆ ಅತ್ಯಾಚಾರ:
ಬಿಜೆಪಿ ನಾಯಕ ಬಾಬುಲಾಲ್ ಮರಾಂಡಿಯ 
ರಾಜಕೀಯ ಸಲಹೆಗಾರನ ಬಂಧನ

ರಾಂಚಿ: ಇಪ್ಪತ್ತರ ಹರೆಯದ ಮನೆಗೆಲಸದ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಹಿರಿಯ ಬಿಜೆಪಿ ನಾಯಕ ಹಾಗೂ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿಯವರ ರಾಜಕೀಯ ಸಲಹೆಗಾರ ಸುನೀಲ್ ತಿವಾರಿಯನ್ನು ರವಿವಾರ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

2020,ಮಾರ್ಚ್ ನಲ್ಲಿ ತಿವಾರಿ ನಿವಾಸದಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದ್ದು,ಈ ಬಗ್ಗೆ ಆ.16ರಂದು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ತಿವಾರಿ,ತನ್ನ ಜೀವಕ್ಕೆ ಬೆದರಿಕೆಯಿದೆ ಮತ್ತು ತನ್ನ ವಿರುದ್ಧದ ಎಫ್ಐಆರ್ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿಕೊಂಡಿದ್ದರು.

ತಿವಾರಿ ಬಂಧನವು ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ನಡೆಯುತ್ತಿರುವ ಕಲಹದಲ್ಲಿ ಇತ್ತೀಚಿನ ಬೆಳವಣಿಗೆಯಾಗಿದೆ.

 ಮುಖ್ಯಮಂತ್ರಿ ಹೇಮಂತ ಸೊರೇನ್ ವಿರುದ್ಧದ ಅಕ್ರಮ ಸಂಪತ್ತು ಗಳಿಕೆ ಪ್ರಕರಣದಲ್ಲಿ ಸಿಬಿಐ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದ್ದು, ಈ ಪ್ರಕರಣವನ್ನು ಲೋಕಪಾಲರು ಕೈಗೆತ್ತಿಕೊಂಡಿದ್ದಾರೆ. ಮುಖ್ಯಮಂತ್ರಿ ವಿರುದ್ಧದ ಅತ್ಯಾಚಾರ ಪ್ರಕರಣವೊಂದು ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಬಾಕಿಯಿದೆ ಮತ್ತು ಈ ವಿಷಯದಲ್ಲಿ ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆಗೆ ಕೋರಿ ತಿವಾರಿ ಅರ್ಜಿಯನ್ನು ಸಲ್ಲಿಸಿದ್ದಾರೆ.SHARE THIS

Author:

0 التعليقات: