Thursday, 2 September 2021

ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಮರುನಾಮಕರಣ ಮಾಡುವಂತೆ ಸಿಎಂಗೆ ಪತ್ರ ಬರೆದ ಪ್ರತಾಪ್ ಸಿಂಹ


 ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಮರುನಾಮಕರಣ ಮಾಡುವಂತೆ ಸಿಎಂಗೆ ಪತ್ರ ಬರೆದ ಪ್ರತಾಪ್ ಸಿಂಹ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.  

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ 'ರಾಜೀವ್ ಗಾಂಧಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶವನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು' ಎಂದು ಮರುಣಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. 

'ಈ ಹಿಂದೆ ರಾಜೀವ್ ಗಾಂಧಿ ಹೆಸರು ತೆಗೆದು ಕಾರ್ಯಪ್ಪ ಅವರ ನಾಮಕರಣ ಮಾಡಲಿ' ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಕೂಡ ಸರ್ಕಾರಕ್ಕೆ ಮನವಿ ಮಾಡಿದ್ದರು.ಇನ್ನು ಮರುನಾಮಕರಣಕರಣಕ್ಕೆ ಒತ್ತಾಯಿಸಿ ಆನ್ ಲೈನ್ ನಲ್ಲಿ ಅಭಿಯಾನ ಕೂಡ ನಡೆಯಿತ್ತಿದೆ. 


SHARE THIS

Author:

0 التعليقات: