ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ದು ಪೊಲೀಸರು
ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಆರು ಮಂದಿ ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ದು ಪೊಲೀಸರು ಮಹಜರು ನಡೆಸುತ್ತಿದ್ದಾರೆ.
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತನ್ನ ಸ್ನೇಹಿತನೊಂದಿಗಿದ್ದ ವಿದ್ಯಾರ್ಥಿನಿ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಮಾಡಿ ತಮಿಳುನಾಡಿನ ತಿರುಪೂರು ಬಳಿಯ ಸ್ವಗ್ರಾಮದಲ್ಲಿ ತಲೆಮರೆಸಿಕೊಂಡಿದ್ದರು. ತನಿಖೆ ಕೈಗೆತ್ತಿಕೊಂಡ ಮೈಸೂರು ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ನಂತರ ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರು ಅತ್ಯಾಚಾರ ನಡೆದ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು.
ಇದೀಗ ಆರೋಪಿಗಳ ತವರೂರಾದ ತಮಿಳುನಾಡಿನ ತಿರುಪೂರು ಬಳಿಯ ಗ್ರಾಮಕ್ಕೆ ಅವರನ್ನು ಕರೆದೊಯ್ದ ಪೊಲೀಸರು ಆರೋಪಿಗಳು ಅತ್ಯಾಚಾರವೆಸಗಿದ್ದ ದಿನ ತೊಟ್ಟಿದ್ದ ಬಟ್ಟೆ, ಮಾರಾಕಾಸ್ತ್ರಗಳು ಸೇರಿದಂತೆ ತನಿಖೆಗೆ ಬೇಕಾದ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿರುವ ಪೊಲೀಸರು, ಆರೋಪಿ ಪತ್ತೆಗಾಗಾಗಿ ತಮಿಳುನಾಡಿನಲ್ಲೇ ಮೊಕ್ಕಾಂ ಹೂಡಿದ್ದಾರೆ.
0 التعليقات: