ನೆಲ್ಯಾಡಿ : ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ನೆಲ್ಯಾಡಿ : ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮೃತ ಸವಾರನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಎಂಜಿರ ಮಲ್ನಾಡ್ ಹೊಟೇಲ್ ಸಮೀಪದ ತಿರುವಿನಲ್ಲಿ ಈ ಅಪಘಾತ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
0 التعليقات: