ದಾವಣಗೆರೆ : ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಮೃತದೇಹ ಪತ್ತೆ; ಕೊಲೆ ಶಂಕೆ
ದಾವಣಗೆರೆ : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡರೋರ್ವರ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಝೈನುಲ್ಲಾ ಖಾನ್ (40) ಮೃತಪಟ್ಟವರು.
ಅವರು ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಬಸವಾ ಪಟ್ಟಣದ ಗುಡ್ಡದಲ್ಲಿ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿದ್ದ ಅವರು ಬೆಸ್ಕಾಂ ಗುತ್ತಿಗೆದಾರರಾಗಿಯು ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಎಸ್ಪಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿದ್ದಾರೆ.
ಈ ಬಗ್ಗೆ ಬಸವಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 التعليقات: