ಬಿಜೆಪಿ ಹಿರಿಯ ಮುಖಂಡ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ಆತ್ಮಹತ್ಯೆಗೆ ಶರಣು
ರಾಜಾನಂದಗಾಂವ್: ಛತ್ತೀಸಗಢ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ (72)ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. 72 ವರ್ಷದ ಭಾಟಿಯಾ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ವಶ ಪಡಿಸಿಕೊಂಡಿದ್ದಾರೆಯೇ ಇಲ್ಲವೇ ಎಂಬುದನ್ನು ಪೊಲೀಸರು ಇನ್ನೂ ಖಚಿತ ಪಡಿಸಿಲ್ಲ. ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾಟಿಯಾ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದರು, ಸೋಂಕಿನಿಂದ ಗುಣಮುಖರಾಗಿದ್ದರೂ ಅವರಿಗೆ ಅನಾರೋಗ್ಯ ಕಾಡುತ್ತಿತ್ತು ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
0 التعليقات: