Sunday, 12 September 2021

ಗಣಪತಿ ವಿಸರ್ಜನೆ ವೇಳೆಯಲ್ಲೇ ಮೂವರು ನೀರುಪಾಲು

ಗಣಪತಿ ವಿಸರ್ಜನೆ ವೇಳೆಯಲ್ಲೇ ಮೂವರು ನೀರುಪಾಲು

ಬೆಂಗಳೂರು: ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೊಂಡಾಪುರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾನೆ.

27 ವರ್ಷದ ಚರಣರಾಜ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಆಯ ತಪ್ಪಿ ಕಾಲುವೆಗೆ ಬಿದ್ದು ಚರಣರಾಜ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹಳೆವೂರು ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಹರಿಚರಣ್ ರೆಡ್ಡಿ(13) ಮತ್ತು ಲಿಖಿತ್(14) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಗಣೇಶಮೂರ್ತಿ ವಿಸರ್ಜಿಸಲು ಜಯಣ್ಣ ಎಂಬುವರಿಗೆ ಸೇರಿದ ಕೃಷಿ ಹೊಂಡಕ್ಕೆ ತೆರಳಿದ್ದ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



SHARE THIS

Author:

0 التعليقات: