Monday, 20 September 2021

ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ: ಬಾಬುಲ್ ಸುಪ್ರಿಯೋ


 ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ: ಬಾಬುಲ್ ಸುಪ್ರಿಯೋ

ಕೋಲ್ಕತಾ: 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿಯಾಗುವ ಅಭ್ಯರ್ಥಿಗಳ ಪೈಕಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಟಿಎಂಸಿ ನಾಯಕ ಹಾಗೂ  ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅಭಿಪ್ರಾಯಪಟ್ಟರು.

"2024 ರಲ್ಲಿ ನಮ್ಮ ಪಕ್ಷದ ಕ್ಯಾಪ್ಟನ್ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬೇಕೆಂದು ನಾನು ಬಯಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಗೆ  ಮುಂಚೂಣಿಯಲ್ಲಿದ್ದಾರೆ ಎಂಬ ಅಂಶವನ್ನು ಯಾರೂ ಅಲ್ಲಗಳೆಯುವಂತಿಲ್ಲ" ಎಂದು  ಬಾಬುಲ್ ಸುಪ್ರಿಯೋ ANI ಗೆ ತಿಳಿಸಿದರು.

ಅಸನ್ಸೋಲ್ ಸಂಸದ ಹಾಗೂ  ಮಾಜಿ ಬಿಜೆಪಿ ನಾಯಕ ಸುಪ್ರಿಯೋ ಅವರು ರಾಜಕೀಯ ತ್ಯಜಿಸುವ ನಿರ್ಧಾರ ಪ್ರಕಟಿಸಿದ ತಿಂಗಳ ನಂತರ ಶನಿವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ಸೇರಿದರು.


SHARE THIS

Author:

0 التعليقات: